
ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಗೌರವಾಧ್ಯಕ್ಷರಾದ ಶ್ರೀ ರವಿಕೃಷ್ಣ ರೆಡ್ಡಿ ಅವರ ಹುಟ್ಟುಹಬ್ಬದ ಅಂಗವಾಗಿ ಪಕ್ಷದ ರಬಕವಿ–ಬನಹಟ್ಟಿ ತಾಲೂಕು ಘಟಕದ ವತಿಯಿಂದ ಬನಹಟ್ಟಿ ಬಸ್ ನಿಲ್ದಾಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಶಿಬಿರದಲ್ಲಿ ರಬಕವಿ–ಬನಹಟ್ಟಿ ತಾಲೂಕು ಅಧ್ಯಕ್ಷರಾದ ನಿಜಾಮ್ ಜಮಾದಾರ್, ಸಂತೋಷ ಕೊಪೆರ್ಡೆ, ಮಲ್ಲಿಕ್ ಬಾರಿಗಡ್ಡಿ, , ಮೀರಾ ಡಾಂಗೆ , ಅನಿಲ್ ಅವಜಕ್ಕಣ್ಣವರ, ಶಂಕರ್ ಸವದಿ, ಶಪ್ಪು ಅಲಾಸ್ ಸೇರಿದಂತೆ ಅನೇಕ ಸರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಅಧ್ಯಕ್ಷ ನಿಜಾಮ್ ಜಮಾದಾರ್, “ರಕ್ತದಾನವು ಜೀವದಾನವಾಗಿದೆ. ಆರೋಗ್ಯವಂತ ಪ್ರತಿಯೊಬ್ಬರೂ ವರ್ಷಕ್ಕೊಮ್ಮೆಯಾದರೂ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ತಮ್ಮ ಅಮೂಲ್ಯ ಕೊಡುಗೆ ನೀಡಬೇಕು. ರಕ್ತದಾನದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ,” ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಕೆ ಆರ್ ಎಸ್ ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು , ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು. ರಕ್ತದಾನ ಮಾಡಿದ ಎಲ್ಲ ದಾನಿಗಳನ್ನು ಆಯೋಜಕರು ಅಭಿನಂದಿಸಿ, ಸಮಾಜಮುಖಿ ಕಾರ್ಯಗಳಲ್ಲಿ ಇದೇ ರೀತಿಯ ಸಹಕಾರ ಮುಂದುವರಿಯಲಿ ಎಂದು ಆಶಿಸಿದರು.

