ಹೊಸೂರಿನಲ್ಲಿ ಹಳ್ಳಕ್ಕೆ ಬಾಂಧಾರ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ :
ರಬಕವಿ-ಬನಹಟ್ಟಿ: ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹೊಸೂರು ಗ್ರಾಮದಲ್ಲಿ ಹನುಮಂತ ವೆಂಕಪ್ಪ ಮೆಣಿ ತೋಟದ ಮನೆ ಸಮೀಪದ ಹಳ್ಳಕ್ಕೆ ನಿರ್ಮಿಸಲಾಗುತ್ತಿರುವ ಬಾಂಧಾರ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿತು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕ ಸಿದ್ದು ಸವದಿ ಭಾಗವಹಿಸಿ, ಕಾಮಗಾರಿಗೆ ಚಾಲನೆ ನೀಡಿದರು. . ಈ ಬಾಂಧಾರ ಕಾಮಗಾರಿಯಿಂದ ಸ್ಥಳೀಯ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸದಸ್ಯರು, ವಿವಿಧ ಸಂಘಟನೆಗಳ ಮುಖಂಡರು, ರೈತರು ಹಾಗೂ ಸಾರ್ವಜನಿಕರು
ಉಪಸ್ಥಿತರಿದ್ದರು.

