ರೇಲ್ವೇ ಅದೀಕಾರಿಗಳು , ರೈತರೊಂದಿಗೆ ಸಂಸದ ಗದ್ದಿಗೌಡರ ಸಬೆ ; ಬಾಗಲಕೋಟೆ-ಕುಡಚಿ ರೈಲ್ವೆ ಯೋಜನೆಗೆ ವೇಗ: ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ
ಬಾಗಲಕೋಟೆ, ಜುಲೈ ೯: ಬಾಗಲಕೋಟೆ–ಕುಡಚಿ ರೈಲ್ವೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯ ಪ್ರಗತಿ ಪರಿಶೀಲನಾ ಸಭೆಯು ಇಂದು ಬಾಗಲಕೋಟೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಯೋಜನೆಯ ಪ್ರಸ್ತುತ ಹಂತ, ಭೂಸ್ವಾಧೀನದ ಪ್ರಗತಿ, ರೈತರಿಗೆ ನೀಡಬೇಕಾದ ಪರಿಹಾರ, ಬಾಕಿ ಇರುವ ಪ್ರಕರಣಗಳು ಹಾಗೂ ಯೋಜನೆಗೆ ಸಂಬAಧಿಸಿದ ವಿವಿಧ ಆಡಳಿತಾತ್ಮಕ ಅಂಶಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಗಣ್ಯರು, ಬಾಗಲಕೋಟೆ–ಕುಡಚಿ ರೈಲ್ವೆ ಯೋಜನೆಯು ಈ ಭಾಗದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದ್ದು, ರೈಲು ಸಂಪರ್ಕ ವಿಸ್ತರಣೆಯೊಂದಿಗೆ ಕೈಗಾರಿಕೆ, ವ್ಯಾಪಾರ, ಕೃಷಿ ಮತ್ತು ಉದ್ಯೋಗಾವಕಾಶಗಳಿಗೆ ಹೊಸ ದಿಕ್ಕನ್ನು ನೀಡಲಿದೆ ಎಂದು ಅಭಿಪ್ರಾಯಪಟ್ಟರು. ಆದ್ದರಿಂದ ಯೋಜನೆಯ ಕಾಮಗಾರಿ ಯಾವುದೇ ವಿಳಂಬವಿಲ್ಲದೆ ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳುವಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಲಾಯಿತು.
ಭೂಸ್ವಾಧೀನ ಪ್ರಕ್ರಿಯೆಯಲ್ಲಿ ರೈತರ ಹಾಗೂ ಸಂತ್ರಸ್ತರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಕಾನೂನುಬದ್ಧ ಹಾಗೂ ಪಾರದರ್ಶಕ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಪರಿಹಾರ ವಿತರಣೆಯಲ್ಲಿ ಅನಗತ್ಯ ವಿಳಂಬವಾಗದAತೆ ಕ್ರಮವಹಿಸುವುದರ ಜೊತೆಗೆ, ರೈತರ ಅಹವಾಲುಗಳನ್ನು ಮಾನವೀಯ ದೃಷ್ಟಿಕೋನದಿಂದ ಪರಿಗಣಿಸಿ ಶೀಘ್ರವಾಗಿ ಇತ್ಯರ್ಥಪಡಿಸಬೇಕು ಎಂದು ತಿಳಿಸಲಾಯಿತು.
ಇದೇ ವೇಳೆ ಯೋಜನೆಗೆ ಸಂಬAಧಿಸಿದAತೆ ಇನ್ನೂ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕರಣಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ರೈಲ್ವೆ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ, ಸ್ಥಳೀಯ ಮಟ್ಟದಲ್ಲಿ ಎದುರಾಗುತ್ತಿರುವ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವ ಮೂಲಕ ಯೋಜನೆಯ ಕಾಮಗಾರಿಗೆ ವೇಗ ನೀಡಬೇಕು ಎಂದು ಸಭೆಯಲ್ಲಿ ಒತ್ತಿ ಹೇಳಲಾಯಿತು.
ಸಭೆಯಲ್ಲಿ ರಾಜ್ಯಸಭಾ ಸದಸ್ಯರಾದ , ಜಿಲ್ಲಾಧಿಕಾರಿಗಳಾದ , ಅಪರ ಜಿಲ್ಲಾಧಿಕಾರಿಗಳಾದ , ನೈರುತ್ಯ ರೈಲ್ವೆ ಉಪ ಮುಖ್ಯ ಇಂಜಿನಿಯರ್ , ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ , ಜಿಲ್ಲಾ ಕಂದಾಯ ಇಲಾಖೆಯ ಅಧಿಕಾರಿಗಳು, ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ರೈಲ್ವೆ ಮಾರ್ಗದ ಭೂಸ್ವಾಧೀನಕ್ಕೆ ಒಳಗಾದ ರೈತರು ಮತ್ತು ಸಂತ್ರಸ್ತರು ಉಪಸ್ಥಿತರಿದ್ದರು.

