ಮುಧೋಳ : ಬಾಗಲಕೋಟೆ ಜಿಲ್ಲೆಯ ಮುದೋಳ ತಾಲೂಕಿನ ಜಾಲಿಭೇರಿ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ರೈಲು ಸೇತುವೆ ನಿರ್ಮಾಣ ಕುರಿತು ಸಂಸತ್ ಪಿ. ಸಿ ಗದ್ದಿಗೌಡರ್ ಅವರ ಅಧ್ಯಕ್ಷತೆಯಲ್ಲಿ ರೈಲ್ವೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆಯನ್ನು ನಡೆಸಿದರು
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆಯಲ್ಲಿ ಬಾಗಲಕೋಟೆ – ಕುಡಚಿ ರೈಲು ಮಾರ್ಗ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದ್ದು , ಜಾಲಿಬೆರಿ ಭಾಗದಲ್ಲಿ ಪಟಪ್ರಭ ನದಿಗೆ ರೈಲು ಸೇತುವೆ ನಿರ್ಮಾಣ ಮಾಡುವ ಅಗತ್ಯವಿದೆ . ವೈಜ್ಞಾನಿಕವಾಗಿ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಅದೇ ಸಮಯದಲ್ಲಿ ರೈತರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗದಂತೆ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ ಜಿಲ್ಲೆಯಲ್ಲಿ ಘಟಪ್ರಭಾ ನದಿಯಿಂದ ಉಂಟಾಗುವ ಪ್ರಭಾವವನ್ನು ಆಧರಿಸಿ ಸೇತುವೆ ನಿರ್ಮಾಣ ಕುರಿತು ಯೋಜನೆ ಸಿದ್ಧಪಡಿಸಬೇಕು ಪ್ರವಾಹ ಬಂದಾಗ ರೈತರ ಜಮೀನುಗಳಿಗೆ ನೀರು ಹೋಗದ ರೀತಿಯಲ್ಲಿ ವೈಜ್ಞಾನಿಕವಾಗಿ ಸೇತುವೆ ನಿರ್ಮಿಸುವ ನಿಟ್ಟಿನಲ್ಲಿ ಹಾಗೂ ರೈತರೊಂದಿಗೆ ಜಂಟಿ ಸ್ಥಳ ಪರಿಶೀಲಿಸಿ ನೀರಿನ ಹರಿವು ನೋಡಿಕೊಂಡು ಯೋಜನೆ ರೂಪಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣಸಾಬ್ ಹಾಡಗಿ ಆಫರ್ ಜಿಲ್ಲಾಧಿಕಾರಿ ಅಶೋಕ್ ತೇಲಿ ಭಾರತೀಯ ರೈಲ್ವೆ ಇಲಾಖೆಯ ಡೆಪುಟಿ ಸಿ ಶಿವಕುಮಾರ್ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜು ನಾಯಕ್ ಆಡಳಿತಕಾರಿ ಉಮೇಶ್ ನಾಯಕ್ ಏಡಿ ಮಹೇಶ್ ಪತ್ತಾರ್ ಉಪಸ್ಥಿತರಿದ್ದರು.

