ಕುಡಚಿ, : ಜುಲೈ ೯: ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದ ಸಮೀಪ ಹರಿಯುವ ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕುಡಚಿ ಸೇತುವೆಯ ಮೇಲೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನದಿಯಲ್ಲಿ ನಿರಂತರವಾಗಿ ನೀರಿನ ಹರಿವು ಹೆಚ್ಚುತ್ತಿರುವುದರಿಂದ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿತ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸೇತುವೆಯ ಎರಡೂ ಬದಿಗಳಲ್ಲಿ ವಾಹನಗಳ ಸಂಚಾರವನ್ನು ನರ್ಬಂಧಿಸಲಾಗಿದ್ದು, ರ್ಯಾಯ ಮರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.
ಸೇತುವೆ ಸುತ್ತಮುತ್ತ ಪೊಲೀಸರು ಹಾಗೂ ಸ್ಥಳೀಯ ಆಡಳಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಲಾಗಿದೆ. ನೀರಿನ ಮಟ್ಟ ಇಳಿದ ಬಳಿಕ ಪರಿಸ್ಥಿತಿಯನ್ನು ಪರಿಶೀಲಿಸಿ ವಾಹನ ಸಂಚಾರ ಪುನರಾರಂಭಿಸುವ ಬಗ್ಗೆ ಅಧಿಕಾರಿಗಳು ತೀರ್ಮಾನ ಕೈಗೊಳ್ಳಲಿದ್ದಾರೆ.
ಜಿಲ್ಲಾಡಳಿತವು ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಅಗತ್ಯವಿದ್ದಲ್ಲಿ ಮಾತ್ರ ಪ್ರಯಾಣ ಕೈಗೊಳ್ಳುವಂತೆ ಹಾಗೂ ಅಧಿಕಾರಿಗಳ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.

